ಮಂಗಳೂರು ವಿವಿ ಯುವ ರೆಡ್‌ಕ್ರಾಸ್ ಘಟಕಕ್ಕೆ ರಾಜ್ಯ ಪ್ರಶಸ್ತಿ

Upayuktha
0



ಮಂಗಳೂರು: ಯುವ ರೆಡ್ಕ್ರಾಸ್ನ ಚಟುವಟಿಕೆಗಳು ಮತ್ತು ಎಲ್ಲಾ ಹಂತಗಳಲ್ಲಿ ಯುವ ರೆಡ್‌ಕ್ರಾಸ್‌ ಅನ್ನು ಬಲಪಡಿಸುವಲ್ಲಿ ನೀಡುವ ಬೆಂಬಲವನ್ನು ಗುರುತಿಸಿ ನೀಡಲಾಗುವ 'ಬೆಸ್ಟ್ ಪರ್ಫಾರ್ಮಿಂಗ್ ಯುನಿವರ್ಸಿಟಿ' ಎಂಬ 2019-20 ನೇ ಸಾಲಿನ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ವಿಭಾಗವು ಭಾಜನವಾಗಿದೆ.


ಮಂಗಳವಾರ ಬೆಂಗಳೂರಿನ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ರೆಡ್‌ಕ್ರಾಸ್‌ನ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ವಿತರಿಸಿದರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಮಂಗಳೂರು ವಿವಿ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಗಣಪತಿ ಗೌಡ ಪ್ರಶಸ್ತಿ ಸ್ವೀಕರಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top