ಬೆಳಗಾವಿ: ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ವಿವಿಧ ನಿಗಮಗಳ ಮುಖ್ಯ ಅಧಿಕಾರಿಗಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಭೆಯು ಇಂದು (ಡಿ.15) ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯಿತು.
ಇಲಾಖೆಯ ವಿವಿಧ ಯೋಜನೆಗಳಾದ ಗಂಗಾಕಲ್ಯಾಣ, ಸಾಲ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಶಾಸಕರಾದ ಸಂಜೀವ ಮಠಂದೂರು, ಡಾ.ವೈ.ಭರತ್ ಶೆಟ್ಟಿ, ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ