ವಿವಿ ಕಾಲೇಜು: ನೂತನ ಶಿಕ್ಷಣ ನೀತಿ ಆಧರಿತ ಅರ್ಥಶಾಸ್ತ್ರ ಕಾರ್ಯಾಗಾರ

Upayuktha
0

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ  ಒಕ್ಕೂಟ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ನೂತನ ಶಿಕ್ಷಣ ನೀತಿ ಆಧರಿತ ಅರ್ಥಶಾಸ್ತ್ರ ಪಠ್ಯಕ್ರಮ ಬೋಧನಾ ವಿಷಯದ ಕುರಿತು ಕಾರ್ಯಾಗಾರ ಏರ್ಪಡಿಸಲಾಗಿತ್ತು.


ಕಾರ್ಯಾಗಾರದಲ್ಲಿ ಸೈಂಟ್ ಅಲೋಶಿಯಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ನೊರ್ಬಟ್ ಲೊಬೋ ಹಾಗೂ ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗಿಯಾಗಿದ್ದರು.


ಬದಲಾಗುತ್ತಿರುವ ಸನ್ನಿವೇಶಕ್ಕೆ ಸರಿಯಾಗಿ ನಾವು ವಿದ್ಯಾರ್ಥಿಗಳಿಗೆ ಪ್ರತಿಸ್ಪಂದಿಸಬೇಕು ಎಂದು ಸಂಪನ್ಮೂಲ ವ್ಯಕ್ತಿಗಳು ಅಭಿಪ್ರಾಯಪಟ್ಟರು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯಾ ರೈ, ನೂತನ ಶಿಕ್ಷಣ ನೀತಿ ಆಧರಿತ ಪಠ್ಯಕ್ರಮ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲೆಂದು ಶುಭ ಹಾರೈಸಿದರು.


ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷ ಡಾ ಶ್ರೀನಿವಾಸಯ್ಯ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಸಮಾರಂಭದಲ್ಲಿ ಅರ್ಥಶಾಸ್ತ್ರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಡಾ. ರಾಮಕೃಷ್ಣ ಬಿ.ಎಂ ಹಾಗೂ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಡಾ. ಜಯವಂತ ನಾಯಕ್ ಹಾಗೂ ಅರ್ಥಶಾಸ್ತ್ರ ಒಕ್ಕೂಟದ ಖಜಾಂಜಿ ಪ್ರೊ ಡೆನ್ಜಿಲ್ ಲೊಬೋ ಉಪಸ್ಥಿತರಿದ್ದರು. 


ಅರ್ಥಶಾಸ್ತ್ರ ಒಕ್ಕೂಟದ ಕಾರ್ಯದರ್ಶಿ ಪ್ರೊ. ಮಧುಸೂದನ ಎನ್ ವಂದಿಸಿದರು. ಪ್ರೊ.ದಯಾ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top