ಸದ್ಯಕ್ಕೆ ನೈಟ್ ಕರ್ಫ್ಯೂ ಇಲ್ಲ: ಸಿಎಂ ಬಸವರಾಜ್ ಬೊಮ್ಮಾಯಿ

Arpitha
0

ಬೆಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ರೀತಿಯ ಕಠಿಣ ನಿಬಂಧನೆಗಳು ಅಥವಾ ನೈಟ್ ಕರ್ಫ್ಯೂ ಜಾರಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.


ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, "ಸದ್ಯಕ್ಕೆ ರಾಜ್ಯದಲ್ಲಿ ಕೋವಿಡ್ ಗೆ ಸಂಬಂಧಿಸಿ ಯಾವುದೇ ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದಿಲ್ಲ. ಒಂದು ವಾರದ ಬೆಳವಣಿಗೆಯನ್ನು ಗಮನಿಸಿ ಅದಕ್ಕೆ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳುತ್ತೇವೆ. ಆದ್ದರಿಂದ ನೈಟ್ ಕರ್ಫ್ಯೂ ಕೂಡ ಇರುವುದಿಲ್ಲ.  ತಾಂತ್ರಿಕ ಸಲಹಾ ಸಮಿತಿಯ ಮುಖ್ಯಸ್ಥ ಡಾ. ಸುದರ್ಶನ್ ಒಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಅವರಲ್ಲಿಯೂ ಇದರ ಬಗ್ಗೆ ಚರ್ಚಿಸಿದ್ದೇವೆ. ಈಗಿರುವ ಕೋವಿಡ್ ಸಂಬಂಧಿತ ದತ್ತಾಂಶಗಳನ್ನು ಪರಿಗಣಿಸಿದರೆ ಭಯ ಪಡುವ ಅಗತ್ಯವಿಲ್ಲ" ಎಂದು ಹೇಳಿದರು.


ವಸತಿ ನಿಲಯ, ಹಾಸ್ಟೆಲ್ ಗಳಲ್ಲಿ ಮಾತ್ರ ವಿಶೇಷವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಎರಡನೇ ಡೋಸ್ ಲಸಿಕೆಯನ್ನು ಕೂಡ ಪಡೆದಿರಬೇಕು. ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿಯನ್ನು ಕೂಡ ಈಗಾಗಲೇ ಕಳಿಸಲಾಗಿದೆ ಎಂದು ತಿಳಿಸಿದರು.

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top