ಉಜಿರೆ: ಶ್ರೀ ಧ.ಮ ಕಾಲೇಜಿನ ಕ್ಯಾಂಪಸ್ ಆವರಣದಲ್ಲಿ ನಂದಿನಿ ಉತ್ಪನ್ನಗಳ ವಿಶೇಷ ಮಾರಾಟ ಮಳಿಗೆ ಆರಂಭಗೊಂಡಿದ್ದು, ಶ್ರೀ ಧ.ಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಮಳಿಗೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಗಳ, ಸಿಬ್ಬಂದಿಗಳ, ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಅಗತ್ಯತೆಗಳನ್ನು ಮನಗಂಡು ಕಾಲೇಜಿನ ಕ್ಯಾಂಟೀನ್ ಪಕ್ಕದಲ್ಲಿ ಈ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ನುಡಿದರು. ಈ ಕೇಂದ್ರದಿಂದ ಬಂದಂತಹ ಲಾಭಾಂಶವನ್ನು ವಿದ್ಯಾರ್ಥಿಗಳಿಗೆ ಶಿಷ್ಯ ವೇತನವಾಗಿ ನೀಡಲಾಗುತ್ತದೆ ಎಂದರು.
ಬರೋಡ ಬ್ಯಾಂಕ್ ಹಾಗೂ ಕ್ಯಾಂಟೀನ್ ನಡುವೆ ವಿಸ್ತೃತ ಸ್ಥಳಾವಕಾಶದಲ್ಲಿ ಶುಭಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ಸತೀಶ್ ಚಂದ್ರ, ಪಿ.ಯು ಕಾಲೇಜಿನ ಪ್ರಾಂಶುಪಾಲ ದಿನೇಶ್ ಚೌಟ, ಇಂಜಿನಿಯರ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ, ಶ್ರೀ. ಧ.ಮ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶಶಿಧರ್ ಶೆಟ್ಟಿ ಹಾಗೂ ಉಜಿರೆಯ ವಿವಿಧ ಶ್ರೀ. ಧ. ಮ.ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು, ಶ್ರೀ.ಧ.ಮ. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರುಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಸಂಪತ್ ಕುಮಾರ್ ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮವನ್ನು ನಿರ್ವಹಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ