|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತೃತೀಯ ಲಿಂಗಿಗಳಿಗೂ ಪೊಲೀಸ್ ಇಲಾಖೆಯಲ್ಲಿ ಹುದ್ದೆಗೆ ಅವಕಾಶ

ತೃತೀಯ ಲಿಂಗಿಗಳಿಗೂ ಪೊಲೀಸ್ ಇಲಾಖೆಯಲ್ಲಿ ಹುದ್ದೆಗೆ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ತೃತೀಯ ಲಿಂಗಿಗಳಿಗೆ ಸುವರ್ಣಾವಕಾಶ ಲಭಿಸಿದೆ. ಇನ್ನು ಮುಂದೆ ಅವರ ಕನಸೂ ನನಸಾಗುತ್ತಿದೆ. ಹೌದು. ಕರ್ನಾಟಕ ಪೊಲೀಸ್ ಇಲಾಖೆ ಇನ್ನು ಮುಂದೆ ಇವರಿಗೆ ಉದ್ಯೋಗವಕಾಶ ನೀಡಲು ನಿರ್ಧಾರ ಕೈಗೊಂಡಿದೆ.

ದೇಶದಲ್ಲೇ ಪ್ರಥಮ ಬಾರಿ ಮಂಗಳಮುಖಿಯರಿಗೆ ಕರ್ನಾಟಕ ಪೊಲೀಸ್ ಇಲಾಖೆ ಉದ್ಯೋಗ ನೀಡಲು ಎದುರಾಗಿದೆ. ಒಟ್ಟು 70 ಹುದ್ದೆಗಳು ಖಾಲಿ ಇದ್ದು ಈ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು.

ಇತ್ತೀಚೆಗೆ ತೃತೀಯ ಲಿಂಗಿಗಳಿಗೆ ಅನೇಕ ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ತೃತೀಯ ಲಿಂಗಿಗಳಿಗೆ ಕೂಡ ಇಲಾಖೆ ಶುಭಸುದ್ದಿ ನೀಡಿದೆ.

0 تعليقات

إرسال تعليق

Post a Comment (0)

أحدث أقدم