ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶುಕ್ರವಾರ ಮಹಾಮಾತೆ ಪದ್ಮಾವತಿ ದೇವಿಯ ನೂತನ ಬಿಂಬ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು.
ಪಂಚಾಮೃತ ಅಭಿಷೇಕ, ಸಹಸ್ರ ನಾಮ ಕುಂಕುಮಾರ್ಚನೆ, ನವಕಲಶಾಭಿಷೇಕ, ಲಕ್ಷ ಹೂವಿನ ಪೂಜೆ, ಪದ್ಮಾವತಿ ದೇವಿಯ ಆರಾಧನೆ, ಅಷ್ಟಾವಧಾನ ಸೇವೆ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಡಿ. ರಾಜೇಂದ್ರಕುಮಾರ್, ನೀತಾ ರಾಜೇಂದ್ರಕುಮಾರ್ ಮತ್ತು ಶ್ರುತಾಜಿತೇಶ್ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ