ಉಡುಪಿ: ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಶಾಸಕ ಉರಿಮಜಲು ರಾಮ ಭಟ್ಟರ ನಿಧನಕ್ಕೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ನಿಷ್ಠೆಯ ಸಿದ್ಧಾಂತಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದ ಶ್ರೀಯುತರು ಅಯೋಧ್ಯೆಯ ರಾಮಜನ್ಮಭೂಮಿ ಆಂದೋಲನದಲ್ಲೂ ಪ್ರಮುಖ ಪಾತ್ರವಹಿಸಿದ್ದನ್ನು ಬಲ್ಲೆವು.
ಪುತ್ತೂರಿನಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ಥಾಪನೆಯ ಪ್ರಮುಖರಲ್ಲಿ ಒಬ್ಬರಾಗಿ ಆ ಭಾಗದಲ್ಲಿ ಮೌಲಿಕ ಶಿಕ್ಷಣದ ಪ್ರವರ್ಧನೆಯಲ್ಲಿಯೂ ಮುಂಚೂಣಿಯಲ್ಲಿದ್ದರು.
ಸಾಮಾಜಿಕ, ಸಾಂಸ್ಕೃತಿಕ ವಾಗಿಯೂ ಅವರ ಸೇವೆ ನಾಡಿಗೆ ಸಂದಿದೆ. ಮೌಲಿಕ ರಾಜಕಾರಣದ ಪ್ರತಿನಿಧಿಯಾಗಿದ್ದು ಅನೇಕರನ್ನು ಆ ದಾರಿಯಲ್ಲಿ ಬೆಳೆಯಲು ಮಾರ್ಗದರ್ಶನ ಮಾಡಿರುವ ಶ್ರೀಯುತ ಭಟ್ಟರು ಶ್ರೀ ಮಠ ಹಾಗೂ ನಮ್ಮಗುರುಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಶ್ರೀಯುತ ರಾಮ ಭಟ್ಟರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇವೆ.
-ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ