||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರಾವಳಿಯ ಕುದುರುಗಳ ಅಧ್ಯಯನಕ್ಕೆ ಪಿಎಚ್ ಡಿ ಪದವಿ

ಕರಾವಳಿಯ ಕುದುರುಗಳ ಅಧ್ಯಯನಕ್ಕೆ ಪಿಎಚ್ ಡಿ ಪದವಿಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ದಿವ್ಯ ಸಾಲಿಯಾನ್ ಇವರು ಮಂಡಿಸಿದ 'ಕರಾವಳಿಯ ಕುದುರುಗಳ ಸಾಂಸ್ಕೃತಿಕ ಅಧ್ಯಯನ' ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ನೀಡಿದೆ.


ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಇವರ ಮಾರ್ಗದರ್ಶನದಲ್ಲಿ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ಕುದುರುಗಳ ಕ್ಷೇತ್ರಕಾರ್ಯ ನಡೆಸಿ ಈ ಮಹಾಪ್ರಬಂಧ ಸಿದ್ಧಪಡಿಸಲಾಗಿತ್ತು.


ಕರಾವಳಿಯ ಕುದುರುಗಳ ಸಮಸ್ಯೆಗಳು, ಸಾಮಾಜಿಕ, ಧಾರ್ಮಿಕ ಸ್ಥಿತಿಗತಿಗಳು, ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು, ಪ್ರವಾಸೋದ್ಯಮದ ಸಾಧ್ಯತೆಗಳು ಹೀಗೆ ಹಲವು ವಿಚಾರಗಳ ಕುರಿತು ಪ್ರಬಂಧ ಬೆಳಕು ಚೆಲ್ಲಿದೆ. ಪುತ್ತೂರು ಸಮೀಪದ ಗುಂಪಕಲ್ಲಿನವರಾದ ದಿವ್ಯ ಸಾಲಿಯಾನ್ ಪ್ರಸ್ತುತ ಸುಳ್ಯದ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post