ಉಡುಪಿ ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Upayuktha
0

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಿಗಳ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ- 2021 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಶಾಂತ ಮತ್ತು ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.


ಹೀಗಾಗಿ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರ ಅನ್ವಯ ಡಿಸೆಂಬರ್ 9 ರ ಸಂಜೆ 5 ಗಂಟೆಯಿಂದ ಡಿ. 10 ರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top