ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಐಕ್ಯುಎಸಿ ಘಟಕ, ಸಂಸ್ಕೃತ ಮತ್ತು ತತ್ತ್ವಶಾಸ್ತ್ರ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಿ.6ರಂದು ಸಂಜೆ 4 ಗಂಟೆಗೆ ರಾಮಾಯಣ - ಪಾಕ್ಷಿಕ ಪ್ರವಚನ ಮಾಲಿಕೆ ಉದ್ಘಾಟನೆಗೊಳ್ಳಲಿದೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸ ವಿ. ಹಿರಣ್ಯ ವೆಂಕಟೇಶ್ವರ ಭಟ್ಟ ಕಾರ್ಯಕ್ರಮವನ್ನು ಉದ್ಘಾಟನೆಗೈದು 'ವಾಲ್ಮೀಕಿ ರಾಮಾಯಣ : ಕವಿ-ಕಾವ್ಯ ಪರಿಚಯ' ಎಂಬ ವಿಷಯದ ಬಗೆಗೆ ಉಪನ್ಯಾಸ ನೀಡಲಿದ್ದಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಹಾಗೂ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ತೇಜಶಂಕರ ಸೋಮಯಾಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ