ಮಂಗಳೂರು: ತಾಲೂಕು ಉಪನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಬರುವ 2022-23ನೇ ಸಾಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಪಟ್ಟಿಯನ್ನು ಪರಿಷ್ಕರಿಸಿ, ಮಂಗಳೂರು ತಾಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಿವಿಸಿ ಉಪಸಮಿತಿ ಸಭೆಯಲ್ಲಿ ದರ ಪಟ್ಟಿಯನ್ನು ಮಂಡಿಸಿ ಅನುಮೋದನೆ ನೀಡಲಾಗಿದೆ.
ಸಾರ್ವಜನಿಕರ ಮಾಹಿತಿಗಾಗಿ ದರಪಟ್ಟಿಯನ್ನು ಮಂಗಳೂರಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ 15 ದಿನದೊಳಗೆ ಮಂಗಳೂರಿನ ಉಪನೋಂದಣಾಧಿಕಾರಿಗಳು ಅಥವಾ ತಹಶೀಲ್ದಾರರ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ತಾಲೂಕಿನ ಉಪ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ