|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುಂದಿನ ವರ್ಷದಿಂದ ಬಿ.ಸಿ.ಎಂ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ

ಮುಂದಿನ ವರ್ಷದಿಂದ ಬಿ.ಸಿ.ಎಂ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ



ಧಾರವಾಡ: ಅತ್ಯಾಚಾರಗಳಂತಹ ಕುಕೃತ್ಯಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಬರುವ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ಪ್ರಾರಂಭಿಸುವಂತೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಧಾರವಾಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ ಮಾಹಿತಿ ನೀಡಿದ್ದಾರೆ.

ಎಲ್ಲಾ ವಸತಿ ನಿಲಯಗಳಲ್ಲಿ ಆಹಾರ ವಿತರಣೆ ಮತ್ತು ಅಗತ್ಯ ವಸ್ತುಗಳ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕೆಂದು ಅವರು ಸೂಚಿಸಿದರು. ಅಷ್ಟೇ ಅಲ್ಲದೆ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಜೊತೆ ವಿದ್ಯಾರ್ಥಿ ಸ್ನೇಹಿಯಾಗಿ ನಡವಳಿಕೆ ತೋರದ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜಾರಿಗೆ ತರಲಾಗುವುದು ಎಂದು ವಿ. ರಶ್ಮಿ ಮಹೇಶ ಹೇಳಿದರು.

ಮುಂದಿನ ವರ್ಷದಿಂದ ವಿದ್ಯಾರ್ಥಿನಿಯರು ಯಾರನ್ನೂ ಅವಲಂಬಿತರಾಗದೆ  ಸ್ವತಃ ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕೆಂಬ ಧ್ಯೇಯದಿಂದ ಈ ಡಿಫೆನ್ಸ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.


0 Comments

Post a Comment

Post a Comment (0)

Previous Post Next Post