ಮಂಗಳೂರು: ವಿದ್ಯಾರ್ಥಿಗಳ ಯೋಚನಾಶಕ್ತಿ ಕೇವಲ ತಮ್ಮ ಸುತ್ತಲಿನ ಪ್ರದೇಶಕ್ಕೆ ಸೀಮಿತವಾಗಿರದೆ ಪ್ರತಿಕ್ಷಣ ಹೊಸ ಸವಾಲಿಗೆ ಸಿದ್ಧವಾಗಿರಬೇಕು. ಈ ಮನೋಭಾವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಲೂ ಸಹಕಾರಿ, ಎಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಜಂಟಿಯಾಗಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಅಧಿನಿಯಮ 2015 ಮತ್ತು 16 ಹಾಗೂ, ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿ ಐಪಿಎಸ್ ಅಧಿಕಾರಿ, ಸಿಐಡಿ ಎಸ್‌ಪಿ ರವಿ ಡಿ ಚನ್ನಣ್ಣನವರ್ ಕಾರ್ಯಕ್ರಮ ಉದ್ಘಾಟಿಸಿ, ನರಕದ ಮೂಲಕ ಕಷ್ಟ ಪಡೆದಿದ್ದರೆ ಸುಖ ಎಂದಿಗೂ ಲಭಿಸುವುದಿಲ್ಲ. ನಾನು ಸತತ ಪ್ರಯತ್ನ ಶ್ರದ್ಧೆ ಹಾಗೂ ಸಮಯಪಾಲನೆ ಮಾಡಿದ್ದರಿಂದ ಇಂದು ಈ ಹುದ್ದೆಯಲ್ಲಿದ್ದೇನೆ ಎಂದು ಸ್ಪರ್ಧಾರ್ಥಿಗಳನ್ನು ಹುರಿದುಂಬಿಸಿದರು. ಇದೇ ಸಂದರ್ಭದಲ್ಲಿ ಸ್ಪರ್ಧಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ , ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಸಿದ್ದಲಿಂಗೇಶ್, ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ರೈ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಲಯಗಳ ನಿಲಯಪಾಲಕರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ