ಇಲ್ಲಿನ ದಿ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾ ತಂಡದ ಗೆಲುವಿನಲ್ಲಿ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಮಹತ್ತರ ಪಾತ್ರವಹಿಸಿದರು. ಈ ಪಂದ್ಯದ ಗೆಲುವಿನೊಂದಿಗೆ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ತಂಡ 50.1 ಓವರ್ ಗಳಿಗೆ 147 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಆಸ್ಟ್ರೇಲಿಯಾ ತಂಡ ಬೃಹತ್ ಮುನ್ನಡೆ ಪಡೆದಿತ್ತು.