ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ, ಬಂದ್ ಕೈ ಬಿಡಿ: ಸಚಿವ ಸುನಿಲ್ ಕುಮಾರ್

Arpitha
0
ಚಿತ್ರದುರ್ಗ: ಕರ್ನಾಟಕ ಬಂದ್ ಮಾಡುವ ಅವಶ್ಯಕತೆಯಿಲ್ಲ. ಪುಂಡಾಟಿಕೆ ಮಾಡುವವರನ್ನು ಸರ್ಕಾರ ಎಂದೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಇದರ ವಿರುದ್ಧ ಮಾತನಾಡುವವರ ಬಗ್ಗೆ ಸರ್ಕಾರ ಕ್ರಮ ವಹಿಸುತ್ತದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು " ನಮ್ಮ ಭಾಷೆ, ರಾಜ್ಯ, ಸಂಸ್ಕ್ರತಿಗೆ ರಾಜ್ಯ ಸರ್ಕಾರ ವಿಶೇಷ ಒತ್ತು ನೀಡುತ್ತದೆ. ಸರ್ಕಾರವು ಕನ್ನಡ ಸಂಘಟನೆ, ಸಂಸ್ಥೆಯ ಜೊತೆ ಉತ್ತಮ ಸಂಬಂಧವನ್ನು ಹೊಂದಿದೆ. ಹೀಗಿರುವಾಗ ಬಂದ್ ಕೈ ಬಿಡುವುದೇ ಒಳ್ಳೆಯದು "ಎಂದು  ಅವರು ಮನವಿ ಮಾಡಿದರು.

ಪ್ರತೀ ಬಾರಿ ಇಂಥ ಘಟನೆಗಳು ನಡೆದಾಗ ಪ್ರತಿಭಟನೆ ನಡೆಸಿ ಬಂದ್ ಮಾಡುವುದು ಸಮಂಜಸವಲ್ಲ. ಬಂದ್ ಮಾಡುವುದು ಒಂದೇ ಎಲ್ಲದಕ್ಕೂ ಪರಿಹಾರವಲ್ಲ. ಸರ್ಕಾರ ಇಂತಹ ವಿಷಯಗಳ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳುತ್ತದೆ ಅದಕ್ಕೆ ಬಂದ್ ವಿಷಯ ಇಲ್ಲಿಗೆ ಕೈ ಬಿಡುವುದು ಸೂಕ್ತ ಎಂದು ಹೇಳಿದರು.

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top