ತಂಬಾಕು ಉತ್ಪನ್ನ ವಶ: ದಂಡ ವಸೂಲಿ

Upayuktha
0

 

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ಮಣಿಪಾಲ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 5, 6(ಎ), 6(ಬಿ) ಮತ್ತು 7 ಅಡಿಯಲ್ಲಿ 28 ಪ್ರಕರಣ ದಾಖಲಿಸಿ 6,400 ರೂ. ದಂಡ ವಸೂಲಿ ಮಾಡಲಾಯಿತು.


ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಹಿರಿಯ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸತೀಶ್ ರಾವ್, ದೇವಪ್ಪ ಪಟಗಾರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕದ ಎಫ್.ಎಲ್.ಸಿ ರಾಜೇಶ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಮಣಿಪಾಲ ಪೊಲೀಸ್ ಠಾಣೆಯ ಆರಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top