ಕುಂದಾಪುರ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ವರ್ಗಾವಣೆ ಆರಂಭವಾಗಿದ್ದು ತೀರಾ ಗ್ರಾಮಾಂತರ ಭಾಗದ ಶಾಲೆಗಳಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ಜಿಲ್ಲೆಯ ಬೈಂದೂರು, ಬ್ರಹ್ಮಾವರ, ಉಡುಪಿ, ಕಾರ್ಕಳ, ಕುಂದಾಪುರ ಈ ಐದು ವಲಯದ ಶಾಲೆಗಳಲ್ಲಿಯೂ ಈ ಸಮಸ್ಯೆ ಹೆಚ್ಚಾಗುತ್ತಿದೆ.
ಸಾರಿಗೆ ವ್ಯವಸ್ಥೆಯಿಲ್ಲದ, ಕುಗ್ರಾಮವೆನಿಸಿಕೊಂಡ ಕೆಲವು ಹಳ್ಳಿಗಳ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರು ಈಗ ವರ್ಗಾವಣೆ ಬಯಸಿದ್ದು ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಫೆಬ್ರವರಿ 26 ರವರೆಗೆ ನಡೆಯಲಿರುವ ರಾಜ್ಯದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಸುಮಾರು 70000 ಕ್ಕೂ ಅಧಿಕ ಶಿಕ್ಷಕರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಳ್ಳಿಯ ಕೆಲವು ಶಾಲೆಗಳಲ್ಲಿ ಏಕೋಪಾಧ್ಯಾಯ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದಂತಾಗಿದೆ.