ತುಳುವ ಐಸಿರ: ಆಮಂತ್ರಣ ಪತ್ರ ಬಿಡುಗಡೆ

Upayuktha
0

ಉಜಿರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿಇದೇ 18 ರಂದು ಶನಿವಾರ ಬೆಂಗಳೂರಿನಲ್ಲಿ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಗೌರವ ಚಾವಡಿ ಪ್ರಶಸ್ತಿ ಪ್ರದಾನ ಮತ್ತು ದತ್ತಿ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರವನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.


ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ ಸಾರ್ ಮತ್ತು ಸದಸ್ಯರಾದ ನರೇಂದ್ರ ಕೆರೆಕಾಡು, ನಾಗೇಶ್‌ ಕುಲಾಲ್ ಹಾಗೂ ಸಿದ್ದಕಟ್ಟೆಯ ಮಲ್ಲಿಕಾ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.


ಇದೇ 18 ರಂದು ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ಸಚಿವ ಸುನಿಲ್ ಕುಮಾರ್‌ ಅಧ್ಯಕ್ಷತೆಯಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top