ಮಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ದಿನಾಂಕ 9ನೇ ಜನವರಿ 2022 ರಂದು ಮಂಗಳೂರಿಗೆ ಆಗಮಿಸಲಿದ್ದು, ಅಂದು NH-169 ಚತುಷ್ಪಥ ಬಿಕರ್ನಕಟ್ಟೆ-ಸಾಣೂರು ರಾಷ್ಟ್ರೀಯ ಹೆದ್ದಾರಿ ಹಾಗೂ NH-75 ಷಟ್ಪಥ ಕಲ್ಲಡ್ಕ ಪ್ಲೈ ಓವರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಂದೇ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆಡ್ಡಹೊಳೆಯಿಂದ-ಪೆರಿಯಶಾಂತಿ ಹಾಗೂ ಪೆರಿಯಶಾಂತಿ- ಬಂಟ್ವಾಳ ಕ್ರಾಸ್ ನಡುವಿನ ಎರಡು ಪ್ಯಾಕೇಜ್ ನ ಕಾಮಗಾರಿಗೆ ಮಾನ್ಯ ಸಚಿವರು ಪುನರ್ ಚಾಲನೆ ನೀಡುವ ಮೂಲಕ ಕಾಮಗಾರಿಗಳಿಗೆ ವೇಗ ನೀಡಲಿದ್ದಾರೆ ಎಂದು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಇವರ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ