ಜನವರಿ 9ಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳೂರಿಗೆ

Upayuktha
0

ಮಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ದಿನಾಂಕ 9ನೇ ಜನವರಿ 2022 ರಂದು ಮಂಗಳೂರಿಗೆ ಆಗಮಿಸಲಿದ್ದು, ಅಂದು NH-169 ಚತುಷ್ಪಥ ಬಿಕರ್ನಕಟ್ಟೆ-ಸಾಣೂರು ರಾಷ್ಟ್ರೀಯ ಹೆದ್ದಾರಿ ಹಾಗೂ NH-75 ಷಟ್ಪಥ ಕಲ್ಲಡ್ಕ ಪ್ಲೈ ಓವರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 


ಅಂದೇ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆಡ್ಡಹೊಳೆಯಿಂದ-ಪೆರಿಯಶಾಂತಿ ಹಾಗೂ ಪೆರಿಯಶಾಂತಿ- ಬಂಟ್ವಾಳ ಕ್ರಾಸ್  ನಡುವಿನ ಎರಡು ಪ್ಯಾಕೇಜ್ ನ ಕಾಮಗಾರಿಗೆ ಮಾನ್ಯ ಸಚಿವರು ಪುನರ್ ಚಾಲನೆ ನೀಡುವ ಮೂಲಕ ಕಾಮಗಾರಿಗಳಿಗೆ ವೇಗ ನೀಡಲಿದ್ದಾರೆ ಎಂದು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಇವರ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top