ಉಜಿರೆ: 2022ರ ಜನವರಿ 18 ರಂದು ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಪೂಜ್ಯ ವಿದ್ಯಾಸಾಗರತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಸ್ವಾಮೀಜಿಯವರು ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಸ್ವಾಮೀಜಿಯವರನ್ನು ಗೌರವಿಸಿದರು. ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.
ದೇವಸ್ಥಾನಕ್ಕೆ ಹೋಗಿ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಆರಂಭದಲ್ಲಿ ಸ್ವಾಮೀಜಿಯವರನ್ನು ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ದೇವಳ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ ರಾವ್ ಕಾರ್ಯಕ್ರಮ ಸಂಯೋಜಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ