ಕರ್ನಾಟಕದಲ್ಲಿ ಇನ್ನೂ ಒಂದು ವಾರ ವಿಪರೀತ ಚಳಿ: ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

Arpitha
0
ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಮಳೆ ಮುಗಿದು ಚಳಿಗಾಲ ಆರಂಭವಾಗಿದೆ. ಜನವರಿ ಮೊದಲ ವಾರದವರೆಗೂ ರಾಜ್ಯಾದ್ಯಂತ ಕೊರೆಯುವ ಚಳಿ ಮುಂದುವರೆಯಲಿದೆ. ಇದರ ನಡುವೆ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಅಕಾಲಿಕ ಮಳೆ ಪ್ರಾರಂಭವಾಗಿದೆ.

ಇಂದು ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ರಾಜ್ಯದಲ್ಲಿ ಚಳಿ ಪ್ರಮಾಣ ವಿಪರೀತವಾಗಿದ್ದು ಕನಿಷ್ಟ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಕರಾವಳಿ, ಆಂಧ್ರಪ್ರದೇಶ, ಪುದುಚೇರಿ, ಕೇರಳದಲ್ಲಿ ಡಿಸೆಂಬರ್ ನಿಂದ ಫೆಬ್ರವರಿಯವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಪ್ರಾದೇಶಿಕ ಹವಾಮಾನ ಕೇಂದ್ರ ಬಿಡುಗಡೆ ಮಾಡಿದ ಮಳೆಯ ಮಾಹಿತಿಯ ಪ್ರಕಾರ ಕರಾವಳಿ, ತಮಿಳುನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Post a Comment

0 Comments
Post a Comment (0)
To Top