ಮುಂಬಯಿ: ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಏಕದಿನ ಸರಣಿಯಲ್ಲಿ ಆಡುವುದಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಬುಧವಾರ ಪ್ರತಿಕ್ರಿಯಿಸಿದ್ದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
"ನಾನು ಎಲ್ಲಾ ಸಮಯದಲ್ಲೂ ಲಭ್ಯವಿದ್ದೇನೆ ಮತ್ತು ಮುಂದೆಯೂ ಲಭ್ಯವಿರುತ್ತೇನೆ. ವಿಶ್ರಾಂತಿಗಾಗಿ ನಾನು ಬಿಸಿಸಿಐ ಜೊತೆ ಮಾತುಕತೆ ನಡೆಸಿಲ್ಲ. ನಾನು ದಕ್ಷಿಣ ಆಫ್ರಿಕಾದಲ್ಲಿ ಕೂಡ ಆಟವಾಡಲು ಸಿದ್ಧನಿದ್ದೇನೆ" ಎಂದು ಕೊಹ್ಲಿ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್ 26 ರಿಂದ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಜನವರಿಯಲ್ಲಿ ಏಕದಿನ ಪಂದ್ಯಗಳನ್ನು ಆಡಲಿದೆ.