||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಶ್ವಕಪ್ ನಲ್ಲಿ ಮತ್ತೆ ಮುಖಾಮುಖಿಯಾಗಲಿದೆ ಭಾರತ- ಪಾಕಿಸ್ತಾನ

ವಿಶ್ವಕಪ್ ನಲ್ಲಿ ಮತ್ತೆ ಮುಖಾಮುಖಿಯಾಗಲಿದೆ ಭಾರತ- ಪಾಕಿಸ್ತಾನ

ಭಾರತ ಮತ್ತು ಪಾಕಿಸ್ತಾನದ ಮಹಿಳಾ ತಂಡಗಳು 2022 ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಭಾರತ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ತನ್ನ ಪಂದ್ಯಾವಳಿಯನ್ನು ಆರಂಭಿಸಲಿದೆ.

ಮಾರ್ಚ್ 6 ರಂದು ಬೇ ಓವಲ್ ಟೌರಂಗದಲ್ಲಿ ಪಂದ್ಯ ನಡೆಯಲಿದ್ದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ‌. ಐಸಿಸಿ ಇಂದು ವಿಶ್ವಕಪ್ ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ಪಂದ್ಯಾವಳಿಯನ್ನು ಆಯೋಜಿಸಲಿದ್ದು ಮಾರ್ಚ್ 4 ರಂದು ವೆಸ್ಟ್ ಇಂಡೀಸ್ ಅನ್ನು ಎದುರಿಸುವ ಮೂಲಕ ವಿಶ್ವಕಪ್ ಆರಂಭವಾಗಲಿದೆ.

ವಿಶ್ವಕಪ್ ಪಂದ್ಯಾವಳಿಯಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿದ್ದು ಮಾರ್ಚ್ 4 ರಿಂದ ಎಪ್ರಿಲ್ 3 ರವರೆಗೆ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಬಾರಿಯ ಸ್ಪರ್ಧೆಯು ಕ್ರೀಡಾಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿದೆ.

0 Comments

Post a Comment

Post a Comment (0)

Previous Post Next Post