ಭಾರತ ಮತ್ತು ಪಾಕಿಸ್ತಾನದ ಮಹಿಳಾ ತಂಡಗಳು 2022 ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಭಾರತ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ತನ್ನ ಪಂದ್ಯಾವಳಿಯನ್ನು ಆರಂಭಿಸಲಿದೆ.
ಮಾರ್ಚ್ 6 ರಂದು ಬೇ ಓವಲ್ ಟೌರಂಗದಲ್ಲಿ ಪಂದ್ಯ ನಡೆಯಲಿದ್ದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಐಸಿಸಿ ಇಂದು ವಿಶ್ವಕಪ್ ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ಪಂದ್ಯಾವಳಿಯನ್ನು ಆಯೋಜಿಸಲಿದ್ದು ಮಾರ್ಚ್ 4 ರಂದು ವೆಸ್ಟ್ ಇಂಡೀಸ್ ಅನ್ನು ಎದುರಿಸುವ ಮೂಲಕ ವಿಶ್ವಕಪ್ ಆರಂಭವಾಗಲಿದೆ.
ವಿಶ್ವಕಪ್ ಪಂದ್ಯಾವಳಿಯಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿದ್ದು ಮಾರ್ಚ್ 4 ರಿಂದ ಎಪ್ರಿಲ್ 3 ರವರೆಗೆ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಬಾರಿಯ ಸ್ಪರ್ಧೆಯು ಕ್ರೀಡಾಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿದೆ.