ಉಡುಪಿ: ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಗಳಿಗೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 / 2574972 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ