|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಿ. 30ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟಕ್ಕೆ ಅರ್ಜಿ ಆಹ್ವಾನ

ಡಿ. 30ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟಕ್ಕೆ ಅರ್ಜಿ ಆಹ್ವಾನ

 

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2021-22ನೇ ಸಾಲಿಗೆ 18 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಂದ ಜಿಲ್ಲಾ ಮಟ್ಟದ ಮುಕ್ತ ಚೆಸ್ ಮತ್ತು ಕೇರಂ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.


ಇದೇ ಡಿ.30ರ ಗುರುವಾರ ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ  ಆಯೋಜಿಸಲಾಗಿದೆ.


ಭಾಗವಹಿಸುವ ಕ್ರೀಡಾಪಟುಗಳು ಇದೇ ಡಿ.27ರ ಸೋಮವಾರ ಸಂಜೆ 5 ಗಂಟೆಯೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ ಸಲ್ಲಿಸಬೇಕು.


ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಿಗ್ಗೆ 8 ಗಂಟೆಯೊಳಗೆ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.


ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು, ದೂ.ಸಂಖ್ಯೆ:0824-2451264 ಹಾಗೂ ಕ್ರೀಡಾಕೂಟದ ನೋಡಲ್ ಅಧಿಕಾರಿ ವಿನೋದ್ ಕುಮಾರ್ ಮೊ.ಸಂಖ್ಯೆ: 9845026869 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post