||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರುಡ್‌ಸೆಟ್‌ನಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ರುಡ್‌ಸೆಟ್‌ನಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

 

ಉಜಿರೆ: ನಿರುದ್ಯೋಗಿ ಯುವಕ ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾ ಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್‌ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ/ ಉದ್ಯೋಗಳನ್ನು ಕಲ್ಪಿಸಿರುವ ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ತರಬೇತಿಗಳ ವಿವರಗಳು:


1. ಅಣಬೆ ಕೃಷಿ : 28.12.2021 ರಿಂದ 06.01.2022 (10 ದಿನಗಳು)

2. ಜೇನು ಕೃಷಿ : 06.01.2022 ರಿಂದ 15.01.2022 (10 ದಿನಗಳು)

3. ಗೃಹ ವಿದ್ಯುತ್ ಉಪಕರಣಗಳ ರಿಪೇರಿ : 10.01.2022 ರಿಂದ 09.02.2022 (30 ದಿನಗಳು)

4. ರಬ್ಬರ್ ಟ್ಯಾಪಿಂಗ್ : 19.01.2022 ರಿಂದ 28.01.2022 (10 ದಿನಗಳು)

5. ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ: 24.01.2022 ರಿಂದ 02.02.2022 (10 ದಿನಗಳು)


6. ಮಹಿಳೆಯರ ವಸ್ತ್ರ ವಿನ್ಯಾಸ : 17.01.2022 ರಿಂದ 15.02.2022 (30 ದಿನಗಳು)

7. ಮಸಾಲ ಪೌಡರ್, ಪಪ್ಪಡ್ ಮತ್ತು ಉಪ್ಪಿನಕಾಯಿ ತಯಾರಿಕೆ: 10.02.2022 ರಿಂದ 19.02.2022 (10 ದಿನಗಳು)

8. ಎಸಿ ಮತು ಫ್ರಿಡ್ಜ್ ರಿಪೇರಿ : 31.01.2022 ರಿಂದ 01.03.2022 (30 ದಿನಗಳು)

9. ಮಹಿಳೆಯರ ಬ್ಯೂಟಿ ಪಾರ್ಲರ್ : 16.02.2022 ರಿಂದ 17.03.2022 (30 ದಿನಗಳು)


ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು, ಎ.ಪಿ.ಎಲ್. ಪಡಿತರ ಚೀಟಿ ಇರುವವರು, ಉದ್ಯೋಗ ಖಾತ್ರಿ ಚೀಟಿಯನ್ನು ಹೊಂದಿರಬೇಕು. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು ಅರ್ಜಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ (www.rudsetujire.com) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು: ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ – 574240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404 ಅಥವಾ 9591044014ಗೆ ಸಂಪರ್ಕಿಸಬಹುದು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post