|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಪ್ರೆಂಟಿಸ್ ತರಬೇತಿ: ಪ.ಪಂಗಡದ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿ: ಪ.ಪಂಗಡದ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

 

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.


ಉಡುಪಿ ಜಿಲ್ಲಾ ಕಚೇರಿಗೆ 2021-22ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಒಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಪ್ರೆಂಟಿಸ್‌ಗೆ ಮಾಹೆಯಾನ 15 ಸಾವಿರ ರೂ. ಗಳ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ, ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.


ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಟೈಪಿಂಗ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 40 ವರ್ಷದೊಳಗಿರಬೇಕು.


ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಸಲ್ಲಿಸಲು ಡಿಸೆಂಬರ್ 24 ಕೊನೆಯ ದಿನವಾಗಿದೆ.


ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್‌ಕೆರೆ, ಉಡುಪಿ ದೂ.ಸಂ. 0820-2985242 ನ್ನು ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post