ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ದಿವ್ಯಾಂಗರಿಂದ ಅರ್ಜಿ ಆಹ್ವಾನ

Upayuktha
0

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ, ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗೌರವಧನದ ಆಧಾರದ ಮೇಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಹ ದಿವ್ಯಾಂಗ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಹತ್ತನೇ ತರಗತಿ ಉತ್ತೀರ್ಣ / ಅನುತ್ತೀರ್ಣರಾಗಿರುವ, ಶೇ. 40ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ವಿಕಲಚೇತನರ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಜನವರಿ 01 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ: 0820-2574810/ 2574811 ಅಥವಾ ತಾಲೂಕು ಪಂಚಾಯತ್‌ನಲ್ಲಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top