ಪೊಲೀಸ್ ದೌರ್ಜನ್ಯ ಪ್ರಕರಣ: ಪಿ.ಎಸ್.ಐ ಅಮಾನತು

Arpitha
0
ಕೋಟ: ಸೋಮವಾರ ರಾತ್ರಿ ಕೋಟತಟ್ಟು ಕೊರಗ ಕಾಲೋನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೋಲೀಸ್ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿ.ಎಸ್.ಐ ಸಂತೋಷ್ ಬಿ.ಪಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ. 

ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿ.ಎಸ್.ಐ ಅವರನ್ನು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಯವರು ಅಮಾನತು ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದು ಪ್ರಕರಣದಲ್ಲಿನ ಐದು ಮಂದಿ ಪೋಲೀಸ್ ಸಿಬ್ಬಂದಿಗಳನ್ನು ಕೋಟ ಪೋಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Post a Comment

0 Comments
Post a Comment (0)
To Top