ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆದುಕೊಳ್ಳುವುದು ಮುಖ್ಯ: ಅಬ್ದುಲ್ ರೆಹಮಾನ್
ಪುತ್ತೂರು: ಆರೋಗ್ಯಯುತ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನು ಕೊರೊನಾ ಲಸಿಕೆಯನ್ನು ಪಡೆದುಕೊಳ್ಳಬೇಕು. ಕರೋನದ ಎರಡು ಲಸಿಕೆಯನ್ನು ಪಡೆದುಕೊಂಡು ನಮ್ಮ ದೇಶದಿಂದ ಕೊರೊನಾವನ್ನು ಓಡಿಸೋಣವೆಂದು ಕುಂಬ್ರ ಪಂಚಾಯತಿನ ಸದಸ್ಯರು ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಹೇಳಿದರು.
ಅವರು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಜೀವಿನಿ ಟ್ರಸ್ಟ್ ಮತ್ತು ವಿವೇಕಾನಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಸಹಯೋಗದಲ್ಲಿ ನಡೆದ ಕೋರೋನ ಲಸಿಕಾ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾತನಾಡಿ ಕೊರೋನದ ಮೊದಲ ಲಸಿಕೆ ಪಡೆದವರು ಯಾವುದೇ ಇಲ್ಲಸಲ್ಲದ ಮಾತುಗಳಿಗೆ ಕಿವಿಗೊಡದೆ ಎರಡನೇ ಡೋಸ್ ಅನ್ನು ಭಯಬೀತರಾಗಿ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿದ್ದ ಬುಡಿಯರ್ ರಾಧಾಕೃಷ್ಣ ರೈ ಮಾತನಾಡಿ, ಕೋರೋನ ಲಸಿಕೆಯ ಬಗ್ಗೆ ಜಾಗೃತಿ ಮಾಹಿತಿಯನ್ನು ನೆರೆದಿದ್ದ ಜನರಿಗೆ ನೀಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಂದ ಬೀದಿ ನಾಟಕ ನಡೆಯಿತು. ಕಾಲೇಜಿನ ಲಲಿತಕಲಾ ಸಂಘದ ವಿದ್ಯಾರ್ಥಿಗಳು ಸುಗ್ಗಿ ಕುಣಿತ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಿಶೋರ್ ಶೆಟ್ಟಿ, ತ್ರಿವೇಣಿ ಫಲತ್ತರ್, ವಿನೋದ್ ಶೆಟ್ಟಿ, ರಾಜೇಶ್ ಮಜರಡ್ಕ, ಡಾ. ಶೋಭಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರದ ಮುಖ್ಯಸ್ಥೆ ವಿದ್ಯಾ ಎಸ್. ಕಾರ್ಯಕ್ರಮವನ್ನು ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ