ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯಲಿರುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆ, ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲ ಮಾಡಿಕೊಡಬೇಕಾಗಿದೆ.
ಹೀಗಾಗಿ ರಾಜ್ಯ ಅಬಕಾರಿ ಕಾಯ್ದೆ 1967 ಕಲಂ 10(ಬಿ) ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135(ಸಿ) ಅನ್ವಯ ಜಿಲ್ಲೆಯಾದ್ಯಂತ ಡಿ. 8 ರ ಸಂಜೆ 6 ಗಂಟೆಯಿಂದ ಡಿ. 10 ರ ಸಂಜೆ 6 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ, ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ