ಈ ಬಗ್ಗೆ ಹೇಳಿಕೆ ನೀಡಿರುವ ಇವರು 15 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
"ಶಿಕ್ಷಕರ ಕೊರತೆಯಿಂದ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಒಂದು ದಿನ ರಜೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.