|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೂತನ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಬಿ.ಸಿ ನಾಗೇಶ್

ನೂತನ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಬಿ.ಸಿ ನಾಗೇಶ್


ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದಂತಾಗಿದೆ. ಈ ಸಮಸ್ಯೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಇವರು 15 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

"ಶಿಕ್ಷಕರ ಕೊರತೆಯಿಂದ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಒಂದು ದಿನ ರಜೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

0 تعليقات

إرسال تعليق

Post a Comment (0)

أحدث أقدم