ವಿವೇಕಾನಂದ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ 'ವ್ಯವಹಾರ ಭೇಟಿ'

Upayuktha
0

 

ಪುತ್ತೂರು ಡಿ.17: ಇಲ್ಲಿನ ವಿವೇಕಾನಂದ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದೊಂದಿಗೆ ಶುಕ್ರವಾರದಂದು ತೃತೀಯ ಬಿಬಿಎ ವಿದ್ಯಾರ್ಥಿಗಳಿಗೆ 'ವ್ಯವಹಾರ ಭೇಟಿ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ ಹಾಗೂ ಉಪನ್ಯಾಸಕ ಕಿಶನ್ ಅವರ ಮಾರ್ಗದರ್ಶನದಲ್ಲಿ ತೃತೀಯ ಬಿಬಿಎ ವಿದ್ಯಾರ್ಥಿಗಳು ಸೌತ್ ಕೆನರಾ ಎಲೆಕ್ಟ್ರಿಕಲ್ಸ್ ಅಂಡ್ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ ಭೇಟಿ ನೀಡಿದರು.


ಸಂಸ್ಥೆಯ ಮಾಲೀಕ ಪಶುಪತಿ ಶರ್ಮ ಇವರು ವ್ಯವಹಾರ ಹಾಗೂ ಅದರ ನಿರ್ವಹಣೆ, ಹೊಸ ಉದ್ಯಮಗಳನ್ನು ಆರಂಭಿಸುವ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯು ಹೇಗೆ ಉತ್ತಮ ಸೇವೆಯನ್ನು ನೀಡಬಹುದು ಎಂಬುದರ ಕುರಿತು ಮಾಹಿತಿಗಳನ್ನು ನೀಡಿದರು. ಹಲವಾರು ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೋರಿಸಿ ಹೇಗೆ ಉತ್ತಮ ಉಪಕರಣಗಳನ್ನು ಆಯ್ಕೆ ಮಾಡಬಹುದು ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.


ಉಪನ್ಯಾಸಕರಾದ ಕಿಶನ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಭಿರಾಮ್ ಹಾಗೂ ಐಶ್ವರ್ಯ ತಮ್ಮ ಅನಿಸಿಕೆಗಳನ್ನು ತಿಳಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top