ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 24ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ಶೋಭಾ ಸಿ.ವಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಭಾಗವಹಿಸಲಿದ್ದು, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎ.ಪಿ ಕೊಡಂಚ ಉಪನ್ಯಾಸ ನೀಡಲಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ