ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯಪಾಲರ ಭೇಟಿ

Upayuktha
0

 


ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ, ಬರಮಾಡಿಕೊಳ್ಳಲಾಯಿತು. ರಾಜ್ಯಪಾಲರು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅರ್ಚನೆ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಿಗೆ ತುಪ್ಪದ ದೀಪ ಆರತಿ ಬೆಳಗಿದ ರಾಜ್ಯಪಾಲರು ಬ್ರಹ್ಮಾರ್ಪಣ ನೆರವೇರಿಸಿದರು. ದೇವಾಲಯದ ಆವರಣದಲ್ಲಿನ ಶ್ರೀ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಮೂಕಾಂಬಿಕಾ ದೇವಾಲಯದ ಪ್ರದಕ್ಷಿಣೆ ಮಾಡಿ, ದೇವಿಯ ಚಿನ್ನದ ರಥ ವೀಕ್ಷಿಸಿದರು.


ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮಿ, ಎಎಸ್ಪಿ ಕುಮಾರ ಚಂದ್ರ, ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top