|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಕುಶಲತೆ ಇರುತ್ತದೆ: ಪ್ರೊ. ನಿತ್ಯಾನಂದ ಶೆಟ್ಟಿ

ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಕುಶಲತೆ ಇರುತ್ತದೆ: ಪ್ರೊ. ನಿತ್ಯಾನಂದ ಶೆಟ್ಟಿ

 

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕನ್ನಡ ಸಂಘದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ, ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ನಿತ್ಯಾನಂದ ಶೆಟ್ಟಿ, ತಾಂತ್ರಿಕ ವಿದ್ಯಾಲಯಗಳಲ್ಲಿ ಅಭ್ಯಸಿಸುವ ಮಕ್ಕಳು ಕೇವಲ ತಾಂತ್ರಿಕತೆಯ ವಿಷಯಗಳಿಗೆ ಒತ್ತು ಕೊಡದೆ ಸಾಮಾಜಿಕ ನೆಲೆಗಟ್ಟಿನಲ್ಲಿ ತಮ್ಮ ಓದನ್ನು ನಡೆಸಬೇಕು. ಒಬ್ಬ ನಾಯಕನಿಗೆ ಜೋತುಬಿದ್ದು ನಾಯಕ ಹೇಳುವುದನ್ನೆಲ್ಲಾ ಮಾಡುವುದನ್ನು ಬಿಟ್ಟು ತಾವು ಕೂಡ ನಾಯಕರಾಗಲು ಪ್ರಯತ್ನ ಪಡಬೇಕು. ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಅಧಿಕಾರ ವಿಕೇಂದ್ರಿಕರಣದ ಹರಿಕಾರ ಅಬ್ದುಲ್ ನಜೀರ್ ಸಾಬ್ ಅವರ ಕಾರ್ಯಕ್ಷಮತೆಯ ಕುರಿತು ತಿಳಿಸಿದ ಅವರು ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಕುಶಲತೆ ಇರುತ್ತದೆ ಅದನ್ನು ಅರಿತುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದರು.


ಆಳ್ವಾಸ್ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ ಆಳ್ವ ಭಾಷಾ ಸಂಬಂಧಿತ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಜ್ಞಾನ ಅಭಿವೃದ್ಧಿ ಸಾಧ್ಯ. ಕ್ರಿಯಾಶೀಲತೆ ಸದಾ ನಮ್ಮ ಅಸ್ಥಿತ್ವವನ್ನು ಇತರರಿಗೆ ಪರಿಚಯಿಸುತ್ತಿರುತ್ತದೆ ಎಂದರು. ವಿದ್ಯಾರ್ಥಿನಿಯರಾದ ಐಶ್ವರ್ಯ ಹಾಗೂ ಮಾನ್ಯ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم