ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್ : ಶಿಕ್ಷಣ ಸಚಿವ ಬಿ.ಸಿ ನಾಗೇಶ್

Arpitha
0

ಬೆಂಗಳೂರು: ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಕೊರೋನಾ ಎರಡನೇ ಅಲೆಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳು ಆದವು. ಮಕ್ಕಳು ಇನ್ನೂ ಸಂಪೂರ್ಣವಾಗಿ ಈ ನೂತನ ವ್ಯವಸ್ಥೆಗೆ ಒಗ್ಗಿಕೊಳ್ಳಬೇಕಷ್ಟೆ‌. ಹೀಗಿರುವಾಗ ಮತ್ತೆ ಕೊರೋನಾ ಮೂರನೆ ಅಲೆಯ ಹೊಸ ರೂಪಾಂತರಿ ಒಮಿಕ್ರಾನ್ ಬಗ್ಗೆ ಚರ್ಚೆಗಳು ನಡೆಯುತ್ತಿದೆ.  

ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರವರು " ಕೊರೋನಾ ಸೋಂಕು ಹೆಚ್ಚಾದರೆ ಶಾಲೆ ಮುಚ್ಚಲು ಸಿದ್ಧರಿದ್ದೇವೆ. ಪೋಷಕರು ಯಾವುದೇ ರೀತಿಯ ಗೊಂದಲ, ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ. ಕೊರೋನಾದ ಬಗ್ಗೆ ಪ್ರತೀ ವಾರ ವರದಿಯನ್ನು ಪಡೆಯುತ್ತಿದ್ದೇವೆ. ವರದಿ ಪ್ರಕಾರ ತಕ್ಷಣಕ್ಕೆ ಭಯ ಬೇಡ" ಎಂದು ಹೇಳಿದ್ದಾರೆ.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top