||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಮಹಾ ವಿದ್ಯಾಲಯದಲ್ಲಿ ಕೌಶಲ್ಯಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ

ವಿವೇಕಾನಂದ ಮಹಾ ವಿದ್ಯಾಲಯದಲ್ಲಿ ಕೌಶಲ್ಯಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ

 

ಪುತ್ತೂರು ಡಿ.6: ಕೌಶಲ್ಯ ವರ್ಧನೆಯು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸರ್ವಾಂಗೀಣ ಅಭಿವೃದ್ಧಿಯನ್ನು ರೂಪಿಸುವಲ್ಲಿ ಸಹಕಾರಿಯಾಗಲಿದೆ ಎಂದು Arkieva ಏಷ್ಯಾ ಪೆಸಿಫಿಕ್ ಪ್ರದೇಶದ ವ್ಯವಸ್ಥಾಪಕ ಆಶಿತ್ ಹೆಗ್ಡೆ ಹೇಳಿದರು.


ಅವರು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ಐಕ್ಯೂಎಸಿ ಘಟಕ ಇದರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಒಂದು ವಾರದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.


ವಿವೇಕಾನಂದ ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿ ವಿದ್ಯಾರ್ಥಿಗಳ ಯಶಸ್ಸಿಗೆ ಪಠ್ಯೇತರ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳು ಅತಿ ಮುಖ್ಯ. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ಹಾದಿಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ.ಎಸ್. ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನವನ್ನು ಅನುಭವಿಸಲು ಸಾಕಷ್ಟು ಅವಕಾಶಗಳಿವೆ. ಕೇವಲ ಪ್ರತ್ಯೇಕ ವಿಷಯಗಳಲ್ಲಿ ಪರಿಣಿತರಾಗಿರದೆ ಸಂವಹನ ನಡೆಸಲು ಹಾಗೂ ಹಿರಿಯರಿಗೆ ಗೌರವ ನೀಡಲು ಕಲಿಯಬೇಕು. ಬದುಕಿನ ಸೂಕ್ಷ್ಮ ಸಂಗತಿಗಳನ್ನು ಅರಿತುಕೊಳ್ಳುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಗುರುತಿಸಿಕೊಳ್ಳಬೇಕು. ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಇವೆಲ್ಲವನ್ನು ಅಭ್ಯಾಸ ಮಾಡಿಕೊಂಡರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ನುಡಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರು ಹಾಗೂ ಪ್ರಥಮ ದ್ವಿತೀಯ ಮತ್ತು ತೃತೀಯ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ವಿಭಾಶ್ರೀ ಪ್ರಾರ್ಥಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಡಾ. ಶ್ರೀಶ ಭಟ್ ವಂದಿಸಿದರು. ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಧನ್ಯ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಆಶಿತ್ ಹೆಗ್ಡೆ ಕೌಶಲ್ಯ ಅಭಿವೃದ್ಧಿಯ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post