ಎನ್.ಎಸ್.ಎಸ್. ವತಿಯಿಂದ ಮಾಹಿತಿ ಕಾರ್ಯಾಗಾರ

Upayuktha
0

 

ಪುತ್ತೂರು: ರಾಷ್ಟೀಯ ಸೇವಾ ಯೋಜನೆ ಎನ್ನುವುದು ವಿದ್ಯಾರ್ಥಿಗಳಲ್ಲಿ ಶಿಸ್ತು, ಬದ್ಧತೆ, ಸಮಯಪ್ರಜ್ಞೆಯನ್ನು ಮೂಡಿಸುತ್ತದೆ ಎಂದು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ವಿಷ್ಣು ಕುಮಾರ್ ಹೇಳಿದರು.


ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶ್ರಮದ ಅರಿವು ಮೂಡಿಸುವಲ್ಲಿ ಎನ್ ಎಸ್ ಎಸ್ ನ ವಾರ್ಷಿಕ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಜೀವನಕ್ಕೆ ಬೇಕಾದ ಉತ್ತಮ ಅಂಶಗಳನ್ನು ಎನ್ ಎಸ್ ಎಸ್ ಹೇಳಿಕೊಡುತ್ತದೆ ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಎನ್.ಎಸ್.ಎಸ್‌ನ ಒಳ್ಳೆಯ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು.


ಕಾರ್ಯಕ್ರಮದಲ್ಲಿ ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶ್ರೀನಾಥ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕರಾದ ನಮನ್ ಸ್ವಾಗತಿಸಿ, ನಾಗೇಂದ್ರ ಶರ್ಮಾ ವಂದಿಸಿದರು. ಚೈತನ್ಯ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top