ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಡಿಸೆಂಬರ್ 24, ಶುಕ್ರವಾರ ಸಂಜೆ 4.15ಕ್ಕೆ ಆಯೋಜಿಸಲಾಗಿದೆ.
'ಗಾಂಧೀಜಿ ಮತ್ತು ಉದ್ಯಮಶೀಲತೆ' ವಿಷಯದ ಕುರಿತು ದತ್ತಿ ಉಪನ್ಯಾಸವನ್ನು ಹಿರಿಯ ವಿದ್ವಾಂಸರು ಹಾಗೂ ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ನಿಕಟಪೂರ್ವ ಅಧ್ಯಕ್ಷರಾದ ಡಾ.ಶ್ಯಾಮಸುಂದರ ಬಿದರಕುಂದಿ ನೀಡಲಿದ್ದಾರೆ.
ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ. ವೂಡೇ.ಪಿ. ಕೃಷ್ಣ, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಸತ್ಯಮಂಗಲ ಮಹಾದೇವ ಹಾಗೂ ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಉಪಸ್ಥಿತರಿರುವರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ