ಮಂಗಳೂರು: ದಿನಾಂಕ 08-12-2021ನೇ ಬುಧವಾರದಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಹಾಗೂ ಯೋಧರು ಒಟ್ಟು ಸೇರಿ 13 ಜನ ಮೃತಪಟ್ಟಿರುತ್ತಾರೆ. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ದಿನಾಂಕ 09-12-2021 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ ಮಂಗಳೂರು, ಇಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಅಗಲಿದ ಯೋಧರಿಗೆ ಮೊದಲು ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಪುಷ್ಪ ನಮನವನ್ನು ಸಲ್ಲಿಸಿದರು. ಬಳಿಕ ಗೃಹರಕ್ಷಕರು ಪುಷ್ಪ ನಮನವನ್ನು ಸಲ್ಲಿಸಿದರು. ಈ ಸಭೆಯಲ್ಲಿ ಗೃಹರಕ್ಷಕ ದಳ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿಎಸ್, ದಲಾಯತ್ ಮೀನಾಕ್ಷಿ, ಮಂಗಳೂರು ಘಟಕದ ಗೃಹರಕ್ಷಕರಾದ ಸುನೀಲ್ ಕುಮಾರ್, ದಿವಾಕರ್, ಸಂದೇಶ್, ಪ್ರಶಾಂತ್, ಮಹೇಶ್ ಪ್ರಸಾದ್, ಸುಲೋಚನಾ, ಜಯಲಕ್ಷ್ಮಿ, ಉಳ್ಳಾಲ ಘಟಕದ ಗೃಹರಕ್ಷಕರಾದ ಸುನೀಲ್ ಮತ್ತು ಧನಂಜಯ್ ಇವರುಗಳು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ