ಉಜಿರೆ: ಬದುಕಿನಲ್ಲಿ ಸಿಗುವ ಅವಕಾಶಗಳು ಹಾಗೂ ಸೌಲಭ್ಯಗಳ ಸದುಪಯೋಗ ಪಡೆದು ಪ್ರತಿಯೊಬ್ಬರೂ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಸೇವಾ ಮನೋಭಾವದಿಂದ ಸದಾ ಸ್ಪೂರ್ತಿಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು, ಅಡಗಿಸಿಕೊಳ್ಳಬಾರದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.
ಅವರು ಭಾನುವಾರ ಉಜಿರೆಯಲ್ಲಿ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ ಕೆ.ಮೋಹನ್ ಕುಮಾರ್ ಮಾಲಕತ್ವದ 'ಕನಸಿನ ಮನೆ'ಯನ್ನು ಉದ್ಘಾಟಿಸಿ ಮಾತನಾಡಿದರು.
ಶಿಸ್ತು, ಸಮಯಪಾಲನೆ, ಬದ್ಧತೆ ಮತ್ತು ಶ್ರಮ ಸಂಸ್ಕೃತಿಯಿಂದ ಸಮಾಜದಲ್ಲಿಉತ್ತಮ ಗೌರವ ಮತ್ತು ಮಾನ್ಯತೆ ಸಿಗುತ್ತದೆ. ಕನಸಿನ ಮನೆಯ ರೂವಾರಿ ಕೆ.ಮೋಹನ್ ಕುಮಾರ್ ಅವರ ಸೃಜನಾತ್ಮಕ ಚಿಂತನೆ ಮತ್ತು ಕರ್ತೃತ್ವ ಶಕ್ತಿ ಶ್ಲಾಘಿಸಿ, ಎಂಜಿನಿಯರ್‌ಗಳ ಸಹಯೋಗದೊಂದಿಗೆ ಸಂಶೋಧನಾತ್ಮಕ ಅಧ್ಯಯನ ನಡೆಸಿ ಹೊಸ ವಿನ್ಯಾಸಗಳನ್ನು ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.
ಕೈಗಾರಿಕಾ ಪ್ರದೇಶ: ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಿ, ಉಜಿರೆ ಬಳಿ ನಿನ್ನಿಕಲ್ಲು ಪ್ರದೇಶದಲ್ಲಿ 108 ಎಕ್ರೆ ಜಾಗದಲ್ಲಿ ಕೈಗಾರಿಕಾ ಪ್ರದೇಶ ರೂಪಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತನ್ಮೂಲಕ ಉದ್ಯೋಗಾವಕಾಶ ಹೆಚ್ಚಾಗಿ, ಸುಂದರ ಉಜಿರೆಯನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್‌ಕೃಷ್ಣ ಪಡ್ವೆಟ್ನಾಯ, ಉದ್ಯಮಿಗಳಾದ ಶಶಿಧರ ಶೆಟ್ಟಿ, ಮೋಹನ್ ಶೆಟ್ಟಿಗಾರ್, ಲೀಲಾವತಿ ಮತ್ತು ಮಕ್ಕಳು ಹಾಗೂ ರೇಶ್ಮಾ ಮೋಹನ್‌ಕುಮಾರ್ ಉಪಸ್ಥಿತರಿದ್ದರು. ಮೋಹನ್‌ಕುಮಾರ್ ಸ್ವಾಗತಿಸಿದರು. ರಾಜೇಶ್ ಪೈ ಧನ್ಯವಾದವಿತ್ತರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ