ವಿವೇಕಾನಂದ ಕಾಲೇಜಿನಲ್ಲಿ ಬಿ. ಕಾಂ. ವಿದ್ಯಾರ್ಥಿಗಳಿಂದ ಪ್ರಬಂಧ ಮಂಡನೆ

Upayuktha
0

 

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಪ್ರಬಂಧ ಮಂಡನೆ (ಪೇಪರ್ ಪ್ರೆಸೆಂಟೇಷನ್) ಕಾರ್ಯಕ್ರಮವು ಬುಧವಾರ ನಡೆಯಿತು.


ಕಾರ್ಯಕ್ರಮದ ಸಮಯನ್ವಯಕಾರರಾಗಿ (moderator) ಭಾಗವಹಿಸಿದ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಮಾತನಾಡಿ, ವಿದ್ಯಾರ್ಥಿಗಳು ಮಂಡಿಸಿದ ವಿಷಯದ ಬಗೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು ಮತ್ತು ಪ್ರಬಂಧ ಮಂಡನೆ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿ ಶುಭ ಹಾರೈಸಿದರು.


ವಾಣಿಜ್ಯ ಸಂಘದ ಸಂಯೋಜಕಿ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಅಕ್ಷತಾ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ, ವಿಷಯ ಮಂಡಿಸಲಿರುವ ವಿದ್ಯಾರ್ಥಿಗಳ ಪರಿಚಯವನ್ನು ಮಾಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿಗಳಾದ ಆಕಾಂಕ್ಷ.ಹೆಚ್, ಸಿದ್ಧನಗೌಡ, ಅನುಷ ಮಲ್ಯ, ರಕ್ಷಾ ಆರ್.ಎಸ್. ವಿಷಯ ಮಂಡಿಸಿದರು.


ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕರು ಹಾಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಿ.ಕಾಂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿ.ಕಾಂ. ವಿದ್ಯಾರ್ಥಿಗಳಾದ ಶುಭಶ್ರೀ ಸ್ವಾಗತಿಸಿ ಮೈಥಿಲಿ ಎಸ್. ರಾವ್ ವಂದಿಸಿದರು, ಸಂಪತ್ ಕುಮಾರ್ ಪಿ. ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top