|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜನವರಿ 4 ರಿಂದ ಕ್ರೀಡಾ ಶಾಲೆ, ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ

ಜನವರಿ 4 ರಿಂದ ಕ್ರೀಡಾ ಶಾಲೆ, ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ

 

ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿಗೆ ಕ್ರೀಡಾಶಾಲೆ ಹಾಗೂ ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ (ಬಾಲಕರು, ಬಾಲಕಿಯರು) ಆಯ್ಕೆ ಪ್ರಕ್ರಿಯೆಯು 2022ರ ಜನವರಿ 4ರಿಂದ ನಡೆಯಲಿದೆ.


ಆಯ್ಕೆ ಪ್ರಕ್ರಿಯೆಗೆ ನಿಗದಿ ಪಡಿಸಿರುವ ಸ್ಥಳಗಳು:


2022ರ ಜನವರಿ 4ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು, ಜನವರಿ 5ರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ತಾಲೂಕಿನ  ತಾಲೂಕು ಕ್ರೀಡಾಂಗಣ ಕೊಂಬೆಟ್ಟು, ಜನವರಿ 6ರ ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕಿನ ವಿಟ್ಲ ಸರ್ಕಾರಿ ವಿಠಲ ಪ್ರೌಢಶಾಲೆ ಮೈದಾನ, ಜನವರಿ 7ರ ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಪೂಂಜಾಲಕಟ್ಟೆ ಪ್ರೌಢಶಾಲೆ ಮೈದಾನ, ಜನವರಿ 10ರ ಬೆಳಿಗ್ಗೆ 10 ಗಂಟೆಗೆ ಮೂಡಬಿದ್ರೆ ತಾಲೂಕಿನ ಸ್ವರಾಜ್ ಮೈದಾನ, ಜನವರಿ 12 ರಂದು ಬೆಳಿಗ್ಗೆ 10 ಗಂಟೆಗೆ ಕಡಬ ತಾಲೂಕಿನ ನೂಜಿಬಾಳ್ತಿಲ ಬೆಥನಿ ಪದವಿಪೂರ್ವ ಕಾಲೇಜು, ಜನವರಿ 14ರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ.


ಆಯ್ಕೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೃಢೀಕೃತ ಜನನ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು, ಹೆಚ್ಚಿನ ಮಾಹಿತಿಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ಕಚೇರಿ ದೂ.ಸಂಖ್ಯೆ: 0824-2451264 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم