|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತಣ್ಣೀರುಬಾವಿ ಟ್ರೀ ಪಾರ್ಕ್ ನಿರ್ವಹಣಾ ಸಮಿತಿ ಸಭೆ

ತಣ್ಣೀರುಬಾವಿ ಟ್ರೀ ಪಾರ್ಕ್ ನಿರ್ವಹಣಾ ಸಮಿತಿ ಸಭೆ

 

ಮಂಗಳೂರು: ತಾಲೂಕಿನ ಬೆಂಗರೆ-ತಣ್ಣೀರು ಬಾವಿಯಲ್ಲಿರುವ ಪ್ರವಾಸೋದ್ಯಮ ತಾಣ ಟ್ರೀ ಪಾರ್ಕ್ ನಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ಸೂಚಿಸಿದರು.


ಅವರು ಡಿ.27ರ ಸೋಮವಾರ ನಗರದ ಅರಣ್ಯ ಇಲಾಖೆಯ ನ್ಯಾಯಾಲಯ ಸಭಾಂಗಣದಲ್ಲಿ ತಣ್ಣೀರುಬಾವಿ ಟ್ರೀ ಪಾರ್ಕ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.


ಸಭೆಯಲ್ಲಿ ಟ್ರೀ ಪಾರ್ಕ್‍ನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿದ ಅವರು, ತಣ್ಣೀರುಬಾವಿ ಟ್ರೀ ಪಾರ್ಕ್‍ನಲ್ಲಿ ಚಾಲ್ತಿಯಲ್ಲಿರುವ ಪ್ರವೇಶ ಶುಲ್ಕ ಹಾಗೂ ಪಾರ್ಕ್‍ನೊಳಗೆ ಚಲನಚಿತ್ರಗಳ ಚಿತ್ರೀಕರಣದ ಶುಲ್ಕವನ್ನು ಪರಿಷ್ಕರಿಸುವ ಅಗತ್ಯಗಳ ಬಗ್ಗೆ ಅವರು ತಿಳಿಸಿದರು.


ಟ್ರೀ ಪಾರ್ಕ್‍ನಲ್ಲಿ ಸಿ.ಸಿ ಕ್ಯಾಮರ ಅಳವಡಿಕೆ, ಕ್ಯಾಂಟೀನ್, ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು, ಅದರಂತೆ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನೇಮಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗೆ ನಿರ್ದೇಶನ ನೀಡಿದರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸುಬ್ರಹ್ಮಣ್ಯ ಮಾತನಾಡಿದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಎಸ್ ಮಾಣಿಕ್ಯ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ. ಪ್ರವೀಣ್, ಮಂಗಳೂರು ವಿಶ್ವವಿದ್ಯಾನಿಲಯದ ಪ್ರೋಫೆಸರ್ ಡಾ.ಪ್ರಶಾಂತ್ ನಾಯ್ಕ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم