ವಿವೇಕಾನಂದ ಮಹಾವಿದ್ಯಾಲಯದಲ್ಲಿ ಒಂದು ದಿನದ ಎನ್ಇಪಿ ಕಾರ್ಯಾಗಾರ

Upayuktha
0

 


ಪುತ್ತೂರು ಡಿ.4: ಒಂದು ಪ್ರಸಂಗದ ಪಾತ್ರವನ್ನು ವಿಭಿನ್ನ ರೀತಿಯಲ್ಲಿ ಪ್ರದರ್ಶನ ಮಾಡಬಹುದು. ಆದರೆ ಆ ಪಾತ್ರವನ್ನು ಅರ್ಥೈಸಿಕೊಂಡು ಜೀವ ತುಂಬುವ ಸಾಮರ್ಥ್ಯ ನಮ್ಮಲ್ಲಿರಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಐಕ್ಯೂಎಸಿ ನಿರ್ದೇಶಕ ಮತ್ತು ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಪ್ರೊ. ಮಂಜುನಾಥ್ ಪಟ್ಟಾಭಿ ಹೇಳಿದರು.


ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿಆಯೋಜಿಸಲಾದ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಕುರಿತಾದ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶನಿವಾರ ಮಾತನಾಡಿದರು.


ಈಗಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಮಾಹಿತಿಯನ್ನು ತಿಳಿದುಕೊಳ್ಳುವುದರಲ್ಲಿ ಬಹಳಷ್ಟು ಮುಂದುವರೆದಿದ್ದಾರೆ. ಆದರೆ ಅದನ್ನು ಜೀವನಕ್ಕೆ ತೊಡಗಿಸಿಕೊಳ್ಳುವ ಅರಿವುಇನ್ನು ತಿಳಿದಿಲ್ಲ. ಶಿಕ್ಷಕರು ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಮೊದಲಿನಿಂದಲೇ ಕಲ್ಪಿಸುತ್ತ ಬಂದಿದ್ದರು ಅದನ್ನು ಉಪಯೋಗಿಸಿಕೊಳ್ಳಬೇಕು ಎಂಬ ಕಟ್ಟುನಿಟ್ಟಿನ ನಿಯಮ ಇರಲಿಲ್ಲ ಆದರೆ ಈಗಿನ ಹೊಸ ಶಿಕ್ಷಣ ನೀತಿ ಅವಕಾಶಗಳನ್ನು ಕಲ್ಪಿಸುವುದರ ಜೊತೆಗೆ ಅವುಗಳನ್ನು ಸದುಪಯೋಗ ಮಾಡಲೇಬೇಕಾದ ನಿಯಮಗಳನ್ನು ತಂದಿದೆ ಎಂದರು.


ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾಲಯದ ಎನ್.ಇ.ಪಿಯ ನೋಡಲ್‌ ಅಧಿಕಾರಿ ಪ್ರೊ. ರವೀಂದ್ರಾಚಾರಿ ಮಾತನಾಡಿ, ಬದಲಾವಣೆ ಜಗದ ನಿಯಮ. ಬದಲಾವಣೆ ಬಹಳ ಔಚಿತ್ಯಪೂರ್ಣ ವಾಗಿರಬೇಕು. ಹಾಗಿದ್ದರೆ ಮಾತ್ರ ಅದು ಅರ್ಥಪೂರ್ಣವಾಗುವುದು. ಶಿಕ್ಷಣ ಕೇವಲ ಮೂರು ಗಂಟೆಗಳಲ್ಲಿ ಬರೆಯುವಂತಹ ಪರೀಕ್ಷೆಗೆ ಸೀಮಿತವಾಗಿರದೆ ಸಮಾಜದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವ ಮಾದರಿಯುತ್ತ ಶಿಕ್ಷಣವಾಗಬೇಕು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿ, ಈ ಕಾರ್ಯಕ್ರಮವು ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹಲವಾರು ಮಾಹಿತಿಗಳನ್ನು ನೀಡಲು ಮತ್ತು ಉಪನ್ಯಾಸಕರಲ್ಲಿ ಇರುವಂತಹ ಸಂದೇಹಗಳನ್ನು ಪರಿಹರಿಸಲು ಆಯೋಜಿಸಿದ ಕಾರ್ಯಕ್ರಮವಾಗಿದೆ ಎಂದು ನುಡಿದರು.


ಕಾರ್ಯಕ್ರಮದಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕಿನ ವಿವಿಧ ಪದವಿ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಹೆಚ್.ಜಿ. ಶ್ರೀಧರ್ ವಂದಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಭಟ್‌ ಕಾರ್ಯಕ್ರಮವನ್ನು ನಿರೂಪಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top